ADVERTISEMENT

ಮಾ. 4ರಿಂದ 20ರವರೆಗೆ ಎಲ್ಲ ಜಿಲ್ಲೆಗಳಲ್ಲೂ ಫಲಾನುಭವಿಗಳ ಸಮಾವೇಶ: ಹಾಲಪ್ಪ ಆಚಾರ್

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2023, 7:54 IST
Last Updated 28 ಫೆಬ್ರುವರಿ 2023, 7:54 IST
   

ಬೆಂಗಳೂರು: ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳ ಅವಧಿಯಲ್ಲಿ ಜಾರಿಯಾದ ವಿವಿಧ ಯೋಜನೆಗಳನ್ನು ಸರಿಯಾಗಿ ಜನರಿಗೆ ತಲುಪಿಸುವ ಉದ್ದೇಶದಿಂದ ಮಾರ್ಚ್ 4ರಿಂದ 20ರವರೆಗೆ ಎಲ್ಲ ಜಿಲ್ಲೆಗಳಲ್ಲೂ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.

ಸಚಿವರಾದ ಎಸ್.ಟಿ.‌ ಸೋಮಶೇಖರ್, ಕೆ. ಗೋಪಾಲಯ್ಯ ಮತ್ತು ಆನಂದ್ ಸಿಂಗ್ ‌ಅವರೊಂದಿಗೆ ಮಂಗಳವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, '31 ಜಿಲ್ಲೆಗಳಲ್ಲೂ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಸ್ಥಳೀಯವಾಗಿ ಸಮಾವೇಶಗಳ ನೇತೃತ್ವ ವಹಿಸಲಿದ್ದಾರೆ' ಎಂದರು.

ಪ್ರತಿಯೊಬ್ಬ ಫಲಾನುಭವಿಯನ್ನೂ ಸಂಪರ್ಕಿಸಿ ಯೋಜನೆಗಳ ಕುರಿತು ಮಾಹಿತಿ ನೀಡುವುದು‌ ಸರ್ಕಾರದ ಉದ್ದೇಶ. ಅದಕ್ಕಾಗಿ ಸಮಾವೇಶಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ ಎಂದು ಹೇಳಿದರು.

ADVERTISEMENT

ಸರ್ಕಾರಿ ನೌಕರರ ಮುಷ್ಕರ ಕುರಿತು ಪ್ರತಿಕ್ರಿಯಿಸಿದ ಸೋಮಶೇಖರ್, 'ಮುಖ್ಯಮಂತ್ರಿ‌ ಬಸವರಾಜ ಬೊಮ್ಮಾಯಿ ಅವರು ಸರ್ಕಾರಿ ನೌಕರರ ಸಂಘದ ಪ್ರಮುಖರ‌ ಜತೆ ಚರ್ಚಿಸಿ, ಸಮಸ್ಯೆ ಪರಿಹರಿಸಲಿದ್ದಾರೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.