ADVERTISEMENT

ಕೃಷಿ ಬಿಎಸ್ಸಿ: ರೈತ ಮಕ್ಕಳಿಗೆ ಶೇ 50 ಮೀಸಲು?

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 21:33 IST
Last Updated 20 ಜೂನ್ 2021, 21:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೃಷಿ ಬಿಎಸ್ಸಿ ಮತ್ತು ತತ್ಸಮಾನ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳಿಗೆ ಮೀಸಲಾತಿ ಪ್ರಮಾಣವನ್ನು ಶೇ 40 ರಿಂದ ಶೇ 50 ಕ್ಕೆ ಹೆಚ್ಚಿಸಲು ಸೋಮವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸುವ ಸಾಧ್ಯತೆ ಇದೆ.

ಕೃಷಿಕರ ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಇತ್ತು. ಸಂಪುಟ ಸಭೆಯಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಪ್ರಸ್ತಾವನೆ ಮಂಡನೆಯಾಗಲಿದೆ.

ಅಲ್ಲದೆ, ಹಾಸನದಲ್ಲಿ ₹196 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಅನುಮತಿ ನೀಡಬೇಕು ಎಂಬ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಶಾಸಕ ಎಚ್‌.ಡಿ.ರೇವಣ್ಣ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರಿದ್ದರು. ಈ ವಿಷಯವೂ ಸಂಪುಟ ಸಭೆಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.