ಸಾವು (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಜೆ.ಬಿ.ನಗರದ ಬಳಿಯ ಕುಳ್ಳಪ್ಪ ಕಾಲೊನಿಯಲ್ಲಿ ಬುಧವಾರ ನೀರಿನ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ.
ಕುಳ್ಳಪ್ಪ ಕಾಲೊನಿ ನಿವಾಸಿ ತಿಮ್ಮಪ್ಪ ಅವರ ಮಗಳಾದ ಅನುಶ್ರೀ, ಮನೆಯ ಮುಂದೆ ಬೆಳಗ್ಗೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ತಿಮ್ಮಪ್ಪ ಅವರು ಕೂಲಿ ಕಾರ್ಮಿಕರಾಗಿದ್ದು, ಕುಟುಂಬ ಸದಸ್ಯರೊಂದಿಗೆ ಕುಳ್ಳಪ್ಪ ಕಾಲೊನಿಯಲ್ಲಿ ವಾಸವಾಗಿದ್ದಾರೆ.
ಕಾಲೊನಿಯ ಮನೆಗಳಿಗೆ ನೀರು ಹಾಕಲು ಬಂದಿದ್ದ ಟ್ಯಾಂಕರ್ ಚಾಲಕ, ವಾಹನವನ್ನು ರಿವರ್ಸ್ ತೆಗೆಯುವ ವೇಳೆ ಬಾಲಕಿಗೆ ಡಿಕ್ಕಿ ಹೊಡೆದಿದ್ದಾನೆ. ಕೆಳಗೆ ಬಿದ್ದ ಬಾಲಕಿ ಮೇಲೆ ಹಿಂದಿನ ಚಕ್ರಗಳು ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದರು.
ಘಟನೆ ನಂತರ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದು, ಜೆ.ಬಿ.ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.