ADVERTISEMENT

ಬೆಂಗಳೂರು: ಎಂಬಿಎ ಓದುತ್ತಿದ್ದ ದಾವಣಗೆರೆ ಯುವತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2025, 0:50 IST
Last Updated 2 ನವೆಂಬರ್ 2025, 0:50 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಸುಬ್ರಹ್ಮಣ್ಯನಗರದಲ್ಲಿ ನೆಲಸಿದ್ದ ಯುವತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

ಸುಪ್ರಿಯಾ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸುಪ್ರಿಯಾ ಅವರದ್ದು ದಾವಣಗೆರೆ. ಸುಬ್ರಹ್ಮಣ್ಯ ನಗರದಲ್ಲಿ ನೆಲಸಿದ್ದರು.

ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಸುಬ್ರಹ್ಮಣ್ಯನಗರದ ರೈಲ್ವೆ ಪ್ಯಾರಲಲ್‌ ರಸ್ತೆಯಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಎಂಬಿಎ ವ್ಯಾಸಂಗ ಮಾಡಿದ್ದರು. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇದರೊಂದಿಗೆ ಬೈಕ್‌ ರೈಡಿಂಗ್‌ ತರಬೇತಿಗೂ ತೆರಳುತ್ತಿದ್ದರು. ಆದರೆ, ಇತ್ತೀಚೆಗೆ ವೈಯಕ್ತಿಕ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ ಎಂದು ಮೂಲಗಳು ಹೇಳಿವೆ.

ಸುಪ್ರಿಯಾ ಅವರು ನೆಲಸಿದ್ದ ಮನೆಯಲ್ಲಿ ವಾಸನೆ ಬರುತ್ತಿತ್ತು. ಅನುಮಾನಗೊಂಡಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಒಡೆದು ಒಳ ಹೋಗಿ ನೋಡಿದಾಗ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆಯಿತು ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.