ADVERTISEMENT

ಬಿಎಂಟಿಸ್‌ ಬಸ್ ಡಿಕ್ಕಿ: ವೃದ್ದೆ ಸಾವು

​ಪ್ರಜಾವಾಣಿ ವಾರ್ತೆ
Published 22 ಜುಲೈ 2025, 16:18 IST
Last Updated 22 ಜುಲೈ 2025, 16:18 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ರೇಷ್ಮೆ ಸಂಸ್ಥೆಯ ಮೆಟ್ರೊ ನಿಲ್ದಾಣದ ಬಳಿ ಬಿಎಂಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಹಿಂಬದಿಯ ಸವಾರರೊಬ್ಬರು ಮೃತಪಟ್ಟಿದ್ದಾರೆ.

ADVERTISEMENT

ಕನಕಪುರ ತಾಲ್ಲೂಕಿನ ತಾತಗುಣಿಯ ವಳಿಯಮ್ಮ(60) ಮೃತಪಟ್ಟವರು. ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ರಾಜ (36) ಅವರು ಗಾಯಗೊಂಡಿದ್ದಾರೆ.

ಕೆ.ಆರ್. ಮಾರುಕಟ್ಟೆಯಿಂದ ಹಂಚಿಪುರ ಕಾಲೊನಿಗೆ ರಾಜ ಹಾಗೂ ವಳಿಯಮ್ಮ ಅವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಆಗ ವೇಗವಾಗಿ ಬಂದ ಬಿಎಂಟಿಸಿ ಬಸ್‌, ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಕೆಳಕ್ಕೆ ಬಿದ್ದಿದ್ದರು. ವಲಿಯಮ್ಮ ಅವರ ಮೇಲೆಯೇ ಬಸ್‌ನ ಚಕ್ರಗಳು ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ಹೇಳಿದರು.

ರಾಜ ಅವರು ನೀಡಿದ ದೂರು ಆಧರಿಸಿ ತಲಘಟ್ಟ‍‍ಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ ನಡೆದ ಬಳಿಕ ಬಸ್ ಅನ್ನು ಸ್ಥಳದಲ್ಲೇ ನಿಲುಗಡೆ ಮಾಡಿ ಚಾಲಕ ಹಾಗೂ ನಿರ್ವಾಹಕ ಪರಾರಿ ಆಗಿದ್ದರು.

ಚಾಲಕನನ್ನು ಪತ್ತೆ ಮಾಡಿ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.