ADVERTISEMENT

ಬೆಂಗಳೂರು | ಅಪಘಾತ: ತಂದೆ ಸಾವು, ಪುತ್ರನಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 15:49 IST
Last Updated 25 ಸೆಪ್ಟೆಂಬರ್ 2025, 15:49 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಬೆಂಗಳೂರು: ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೀರಿನ ಟ್ಯಾಂಕರ್‌ ಸಾಗಿಸುವ ವಾಹನ ಹಾಗೂ ದ್ವಿಚಕ್ರ ವಾಹನದ ನಡುವೆ ಬುಧವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಕೋಲಾರದ ಮುನಿರಾಜ್‌ (52) ಎಂಬುವವರು ಮೃತಪಟ್ಟಿದ್ದಾರೆ. ಅವರ ಪುತ್ರ ಧನಂಜಯ(16) ಅವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. 

ADVERTISEMENT

ಬೆಳಿಗ್ಗೆ 7.45ರ ಸುಮಾರಿಗೆ ಮುನಿರಾಜು ಅವರು ತಮ್ಮ ಬೈಕ್‌ನಲ್ಲಿ ಪುತ್ರನನ್ನು ಕರೆದುಕೊಂಡು ನಾಗಗೊಂಡನಹಳ್ಳಿ ಕಡೆಯಿಂದ ಇಮ್ಮಡಿಹಳ್ಳಿ ಕಡೆಗೆ ಹೋಗುತ್ತಿದ್ದರು. ಇಮ್ಮಡಿಹಳ್ಳಿ ಮುಖ್ಯರಸ್ತೆಯ ಸಾಯಿ ಸನ್‌ಶೈನ್‌ ಅಪಾರ್ಟ್‌ಮೆಂಟ್‌ ಎದುರು ವೇಗವಾಗಿ ಬಂದ ವಾಹನವು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಆಗ, ಬೈಕ್‌ನಲ್ಲಿದ್ದ ಇಬ್ಬರೂ ರಸ್ತೆಗೆ ಬಿದ್ದಿದ್ದರು. ಮುನಿರಾಜು ಅವರ ತಲೆ ಹಾಗೂ ಕಾಲಿಗೆ ಗಂಭೀರವಾದ ಗಾಯಗಳಾಗಿದ್ದವು. ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಮೃತಪಟ್ಟಿದ್ದಾರೆ. ಧನಂಜಯಗೆ ಚಿಕಿತ್ಸೆ ಮುಂದುವರಿದಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.