ಅಪಘಾತ
–ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಇಲ್ಲಿನ ಕಂಠೀರವ ಒಳಾಂಗಣ ಕ್ರೀಡಾಂಗಣ ಬಳಿಯ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.
ಡಿ.ಜೆ. ಹಳ್ಳಿ ನಿವಾಸಿ ರಫತ್ ಉಲ್ಲಾ (56) ಮೃತಪಟ್ಟವರು.
ರಫತ್ ಉಲ್ಲಾ ಅವರು ಸ್ಕೂಟರ್‌ನಲ್ಲಿ ಬರುತ್ತಿದ್ದಾಗ ಸಿದ್ದಲಿಂಗಯ್ಯ ಜಂಕ್ಷನ್ ಬಳಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದರು. ಅದೇ ಮಾರ್ಗದಲ್ಲಿ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್‌ನ ಚಕ್ರಗಳು ರಫತ್ ಉಲ್ಲಾ ಅವರ ಮೇಲೆಯೇ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.
ಸ್ಥಳಕ್ಕೆ ಬಂದ ಹಲಸೂರು ಗೇಟ್ ಸಂಚಾರ ಠಾಣೆಯ ಪೊಲೀಸರು, ಖಾಸಗಿ ಬಸ್ ಜಪ್ತಿ ಮಾಡಿಕೊಂಡು ಚಾಲಕನನ್ನು ವಶಕ್ಕೆ ಪಡೆದುಕೊಂಡರು. ಚಾಲಕ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 281 ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.