
ಸಾವು (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಯತ್ನಿಸುವ ವೇಳೆ ಸಂಭವಿಸಿದ ಅಪಘಾತದಲ್ಲಿ 26 ವರ್ಷದ ಪ್ರಿಯಾಂಕಾ ಮೃತಪಟ್ಟಿದ್ದಾರೆ.
ಸ್ವಾಫ್ಟ್‌ವೇರ್ ಕಂಪನಿಯ ಉದ್ಯೋಗಿ ಪ್ರಿಯಾಂಕಾ ತನ್ನ ಅಣ್ಣನೊಂದಿಗೆ ದ್ವಿಚಕ್ರ ವಾಹನದಲ್ಲಿ ಮಾದಾವರ ಕಡೆಗೆ ತೆರಳುತ್ತಿದ್ದರು. ಈ ವೇಳೆ ಎಪಿಎಂಸಿ ರಸ್ತೆಯಲ್ಲಿ ದೊಡ್ಡ ಗುಂಡಿಯನ್ನು ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣ ಕಳೆದುಕೊಂಡರು. ಇಬ್ಬರೂ ರಸ್ತೆ ಮೇಲೆ ಬಿದ್ದರು. ಪ್ರಿಯಾಂಕಾ ಅವರು ಕ್ಯಾಂಟರ್ ಲಾರಿಯ ಚಕ್ರದ ಕೆಳಗೆ ಸಿಲುಕಿದ್ದಾರೆ. ತಲೆಗೆ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹುಸ್ಕೂರು ಬಳಿ ಕಾಮಗಾರಿಯಿಂದಾಗಿ ರಸ್ತೆ ಹದಗೆಟ್ಟಿದ್ದು, ಗುಂಡಿಯನ್ನು ತಪ್ಪಿಸಲು ಹೋಗಿ ಈ ಅನಾಹುತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.