ಬೆಂಗಳೂರು: ಕೃಷಿ ವಿಶ್ವವಿದ್ಯಾನಿಲಯದ 55ನೇ ಘಟಿಕೋತ್ಸವ ಇದೇ 21ರಂದು ನಡೆಯಲಿದೆ.
ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಮಾವೇಶ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸಲಿದ್ದು, ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ. ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ಮಹಾ ನಿರ್ದೇಶಕರು ತ್ರಿಲೋಚನ್ ಮಹಾಪಾತ್ರ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಕೃಷಿ ಸಚಿವ ಬಿ.ಸಿ. ಪಾಟೀಲ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.