
ಪ್ರಜಾವಾಣಿ ವಾರ್ತೆ
ಬೆಂಗಳೂರು: ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಜಯನಗರ 4ನೇ ಟಿ-ಬ್ಲಾಕ್‌ನ ಸ್ವಾಗತ್ ರಸ್ತೆಯಲ್ಲಿರುವ ‘ಸ್ಟಾರ್ ಅಂಬೂರ್ ಬಿರಿಯಾನಿ ಹೋಟೆಲ್’ನಲ್ಲಿ ಹಸಿ ಕಸ ಹಾಗೂ ಒಣ ಕಸ ಬೇರ್ಪಡಿಸದೆ, ಘನತ್ಯಾಜ್ಯ ನಿರ್ವಹಣೆ ಸರಿಯಾಗಿ ನಿರ್ವಹಣೆ ಮಾಡದ ಕಾರಣಕ್ಕೆ ₹1 ಲಕ್ಷ ದಂಡ ವಿಧಿಸಲಾಗಿದೆ.
ಹೋಟೆಲ್ ಒಳಗಡೆ ಅಶುಚಿತ್ವವಿರುವುದು, ಫ್ರಿಜ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶುಚಿತ್ವ ಇಲ್ಲದಿರುವುದು ದಾಳಿಯ ಸಂದರ್ಭದಲ್ಲಿ ಕಂಡುಬಂದಿದೆ. ಇದೆಲ್ಲ ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ಹೋಟೆಲ್‌ನವರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಬಿಎಸ್‌ಡಬ್ಲ್ಯುಎಂಎಲ್‌ನ ಎಜಿಎಂ ಶ್ವೇತಾ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.