ಬೆಂಗಳೂರು: ಸಾಂಕ್ರಾಮಿಕ ರೋಗಗಳಾದ ಡೆಂಗಿ ಹಾಗೂ ಚಿಕೂನ್‌ಗುನ್ಯಾ ನಿಯಂತ್ರಣಕ್ಕೆ ವಿಶೇಷ ಅಭಿಯಾನ ಕೈಗೊಳ್ಳುವಂತೆ ಸೂಚಿಸಿರುವ ಆರೋಗ್ಯ ಇಲಾಖೆ, ಈ ಅಭಿಯಾನಕ್ಕಾಗಿ ₹ 7.25 ಕೋಟಿ ವೆಚ್ಚ ಮಾಡುವ ಪ್ರಸ್ತಾವಕ್ಕೆ ಅನುಮೋದನೆ ನೀಡಿ ಆದೇಶ ಹೊರಡಿಸಿದೆ.
ರೋಗಗಳ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಪ್ರತಿ ಜಿಲ್ಲೆಗೆ ಒಬ್ಬರಂತೆ ಕೀಟ ಸಂಗ್ರಹಕಾರರನ್ನು ನೇಮಿಸಿಕೊಳ್ಳಬೇಕು. ರೋಗ ಹರಡುವ ವೈರಾಣುಗಳನ್ನು ಪತ್ತೆ ಮಾಡಲು ತಂತ್ರಜ್ಞಾನದ ಅಳವಡಿಕೆ, ಈಡಿಸ್ ಲಾರ್ವಾ ನಿರ್ಮೂಲನೆಗೆ ಸ್ವಯಂ ಸೇವಕರ ನಿಯೋಜನೆ, ಡೆಂಗಿ ಪರೀಕ್ಷೆಗೆ ಕಿಟ್‌ಗಳ ಖರೀದಿ ಸೇರಿ ವಿವಿಧ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.