ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಯೋಹಾನ್ ಅಲಿಯಾಸ್ ಪಾಲು (36) ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈತನ ವಿರುದ್ಧ ಚಂದ್ರಾಲೇಔಟ್, ಅನ್ನಪೂರ್ಣೇಶ್ವರಿನಗರ, ಬಾಗಲಗುಂಟೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಆರೋಪಿ ಯೋಹಾನ್ ವಿರುದ್ಧ 2010ರಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. 2012ರಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿ ಪತ್ತೆಗಾಗಿ ತಂಡ ರಚಿಸಲಾಗಿತ್ತು. ಈತನ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಿ, ಬಂಧಿಸಿ ವೈಯಾಲಿ ಕಾವಲ್ ಠಾಣೆ ಒಪ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.