
ಬೆಂಗಳೂರು: ನಗರ ಜಿಲ್ಲೆಯ ಬ್ಯಾಂಕ್‌ಗಳಲ್ಲಿ ದೀರ್ಘಕಾಲದಿಂದ ಹಕ್ಕು ಪಡೆಯದೇ ಉಳಿದಿರುವ ಬ್ಯಾಂಕ್ ಠೇವಣಿ ವಿಮೆ ಕಂತು ಮತ್ತು ಷೇರುಗಳನ್ನು ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸಲು ಲೀಡ್ ಬ್ಯಾಂಕ್ ಶಿಬಿರ ಹಮ್ಮಿಕೊಂಡಿದೆ.
ನ. 21ರ ಬೆಳಿಗ್ಗೆ 10ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶಿಬಿರವನ್ನು ಆಯೋಜಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಯತೀಶ್ ಆರ್., ರಿಸರ್ವ್ ಬ್ಯಾಂಕ್ ಪ್ರಾಂತೀಯ ನಿರ್ದೇಶಕ ಕಾಯಾ ತ್ರಿಪಾಠಿ ಹಾಗೂ ಕೆನರಾ ಬ್ಯಾಂಕಿನ ಕಾರ್ಯ ನಿರ್ವಾಹಕ ಅಧಿಕಾರಿ ಭಾವೇಂದ್ರಕುಮಾರ್ ಭಾಗವಹಿಸಲಿದ್ದಾರೆ.
ಬ್ಯಾಂಕಿಂಗ್ ವಲಯ, ವಿಮಾ ವಲಯ, ಹಣಕಾಸು ವಲಯ ಮತ್ತು ಇತರ ವಲಯಗಳ ಅಧಿಕಾರಿಗಳು ಈ ಶಿಬಿರದಲ್ಲಿ ಭಾಗವಹಿಸಿ ಸಲಹೆ ನೀಡಲಿದ್ದಾರೆ. ಸಾರ್ವಜನಿಕರು ಗುರುತಿನ ದಾಖಲೆ ಅಥವಾ ಅರ್ಹತಾ ಪತ್ರಗಳೊಂದಿಗೆ ಶಿಬಿರದಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.