ADVERTISEMENT

ಬೆಂಗಳೂರು ವಕೀಲರ ಸಂಘದ ಚುನಾವಣೆ: ಮತದಾನ ಆರಂಭ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2021, 4:49 IST
Last Updated 19 ಡಿಸೆಂಬರ್ 2021, 4:49 IST
   

ಬೆಂಗಳೂರು: ಏಷ್ಯಾದಲ್ಲೇ ಅತಿ ದೊಡ್ಡ ವಕೀಲರ ಸಂಘಎನಿಸಿರುವ ಬೆಂಗಳೂರು ವಕೀಲರ ಸಂಘಕ್ಕೆ (ಎಎಬಿ) ಡಿ.19ರ ಭಾನುವಾರ ಚುನಾವಣೆ ನಡೆಯಲಿದ್ದು, ಸಿಟಿ ಸಿವಿಲ್‌ ಕೋರ್ಟ್‌ನಲ್ಲಿಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ.

ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಸ್ಥಾನಗಳು, ಹೈಕೋರ್ಟ್‌ನ 7, ಮೇಯೊ ಹಾಲ್ ಮತ್ತು ಮ್ಯಾಜಿಸ್ಟ್ರೇಟ್ ಕೋರ್ಟ್ ಘಟಕಗಳ ತಲಾ 5 ಮತ್ತು ಸಿಟಿ ಸಿವಿಲ್ ಕೋರ್ಟ್‌ನ 12 ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಗಳಿಗೂ ಇದೇ ವೇಳೆ ಮತದಾನ ನಡೆಯಲಿದೆ.

ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಎ.ಪಿ.ರಂಗನಾಥ್‌, ಮಾಜಿ ಅಧ್ಯಕ್ಷ ಎಚ್‌.ಸಿ. ಶಿವರಾಂ, ವಕೀಲ ವಿವೇಕ ಸುಬ್ಬಾರೆಡ್ಡಿ ಹಾಗೂ ರಾಜ್ಯ ವಕೀಲರ ಪರಿಷತ್‌ ಸದಸ್ಯ ಆರ್‌. ರಾಜಣ್ಣ ಸ್ಪರ್ಧಾ ಕಣದಲ್ಲಿದ್ದರೆ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ 8 ಮಂದಿ ಆಕಾಂಕ್ಷಿಗಳಿದ್ದಾರೆ. ಖಜಾಂಚಿ ಸ್ಥಾನಕ್ಕೆ 10 ಮಂದಿ, ಆಡಳಿತ ಮಂಡಳಿಯ 29 ಸದಸ್ಯ ಸ್ಥಾನಗಳಿಗೆ ಒಟ್ಟು 112 ಮಂದಿ ಇದ್ದು, ಸಂಘದ ಒಟ್ಟು 32 ಸ್ಥಾನಗಳಿಗೆ 134 ವಕೀಲರು ಅದೃಷ್ಟ ಪರೀಕ್ಷೆ ನಡೆಸಿದ್ದಾರೆ.

ADVERTISEMENT

ಸಂಘದ ನಾಲ್ಕೂ ಘಟಕಗಳಿಂದ ಒಟ್ಟು 16,568 ವಕೀಲರು ಮತ ಚಲಾಯಿಸಲಿದ್ದಾರೆ. ಈ ಬಾರಿ ಮತದಾನಕ್ಕೆ ಇವಿಎಂ ಯಂತ್ರಗಳನ್ನು ಬಳಸಲಾಗುತ್ತಿದ್ದು, ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.