ADVERTISEMENT

ಸಿದ್ದರಾಮಯ್ಯ ಹೇಳಿಕೆ ಸುಳ್ಳು, ಬಿಬಿಎಂಪಿ ಕಡತ ನಾಪತ್ತೆಯಾಗಿಲ್ಲ: ಬಿಜೆಪಿ

ಪ್ರಜಾವಾಣಿ ವೆಬ್ ಡೆಸ್ಕ್

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2022, 7:29 IST
Last Updated 27 ನವೆಂಬರ್ 2022, 7:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬಿಬಿಎಂಪಿ ಜಾಹೀರಾತು ನೀತಿಗೆ ಸಂಬಂಧಿಸಿದ ಕಡತಗಳು ನಾಪತ್ತೆಯಾಗಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಬಿಬಿಎಂಪಿ ಕಡತಗಳು ನಾಪತ್ತೆಯಾಗಿವೆ ಎಂಬ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಪ್ರಸ್ತಾಪಿಸಿ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.

‘ಸಿದ್ದರಾಮಯ್ಯ ಅವರ ಆರೋಪ ನಿರಾಧಾರ ಮತ್ತು ಸುಳ್ಳು ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ. ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬ ಗಾದೆಯಂತೆ ಸಿದ್ದರಾಮಯ್ಯ ವರ್ತಿಸುತ್ತಿರುವುದು ನಾಚಿಗೆಗೇಡಿನ ಸಂಗತಿ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ADVERTISEMENT

‘ಬಿಬಿಎಂಪಿ ಜಾಹೀರಾತು ನೀತಿಗೆ ಸಂಬಂಧಿಸಿದ ಎಲ್ಲ ಕಡತಗಳು (ಮುಖ್ಯ ಕಡತ, ಭಾಗ 1, 3 ಮತ್ತು 4) ನಗರಾಭಿವೃದ್ಧಿ ಇಲಾಖೆಯಲ್ಲಿವೆ. ಕಡತಗಳು ಯಾವುದೇ ಸಚಿವರ ಕಚೇರಿ ಅಥವಾ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕಾಣೆಯಾಗಿಲ್ಲ ಅಥವಾ ತಪ್ಪಿಹೋಗಿಲ್ಲ. ಕಾಂಗ್ರೆಸ್ ಜನತೆಯ ಹಾದಿ ತಪ್ಪಿಸಲು ಪ್ರಯತ್ನಿಸಿರುವುದಕ್ಕೆ ರಾಜ್ಯದ ಜನತೆಯ ಕ್ಷಮೆ ಕೇಳಬೇಕು’ ಎಂದು ಬಿಜೆಪಿ ಆಗ್ರಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.