ಬೆಂಗಳೂರು: ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಜ್ಞಾನಭಾರತಿ ಬಡಾವಣೆಯಲ್ಲಿ ₹153 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ವಳಗೇರಹಳ್ಳಿ ಗ್ರಾಮದ ಸರ್ವೆ ನಂ. 26/3ರಲ್ಲಿನ 1 ಎಕರೆ 16 ಗುಂಟೆ ಪ್ರದೇಶದಲ್ಲಿ ಅನಧಿಕೃತ ನಿರ್ಮಾಣವನ್ನು ತೆರವುಗೊಳಿಸಿ, ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಪ್ರದೇಶವನ್ನು ವಶಪಡಿಸಿಕೊಂಡಿತು. ಸುತ್ತಲೂ ಬೇಲಿ ಹಾಕಿ, ಎಚ್ಚರಿಕೆ ಫಲಕ ಅಳವಡಿಸಿದೆ.
ಪ್ರಾಧಿಕಾರದ ಅಭಿಯಂತರ ಸದಸ್ಯ, ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ, ಪಶ್ಚಿಮ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ವಿದ್ಯುತ್ ವಿಭಾಗದ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು, ಸರ್ವೇಯರ್, ಸ್ಥಳೀಯ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.