ಸಾವು
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ರಾಜಾಜಿನಗರ ಮೆಟ್ರೊ ನಿಲ್ದಾಣ ಬಳಿಯ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಬುಧವಾರ ಸ್ಕೂಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿನಯ್ (23) ಅವರು ಮೃತಪಟ್ಟಿದ್ದಾರೆ.
ವಿಜಯನಗರದ ಬಳಿಯ ಹಂಪಿನಗರ ನಿವಾಸಿ ವಿನಯ್, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ಬೆಳಿಗ್ಗೆ ಬೈಕ್‍ನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಆಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸಿರಿ (22) ಅವರು ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.
ಅತಿ ವೇಗವಾಗಿ ಬೈಕ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ವಿನಯ್, ಎದುರಿಗೆ ಹೋಗುತ್ತಿದ್ದ ಸಿರಿ ಅವರ ಸ್ಕೂಟರ್‌ಗೆ ಗುದ್ದಿಸಿದ್ದರು. ಪರಿಣಾಮ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಗಾಯಗೊಂಡ ಅವರಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ವಿನಯ್, ಆಸ್ಪತ್ರೆಯಲ್ಲಿ ಬುಧವಾರ ಸಂಜೆ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.
ಅಪಘಾತದ ಸಂದರ್ಭದಲ್ಲಿ ವಿನಯ್, ಹೆಲ್ಮೆಟ್ ಧರಿಸಿರಲಿಲ್ಲ. ಹೀಗಾಗಿ, ಅವರ ತಲೆಗೆ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿತ್ತು ಎಂದು ಮಲ್ಲೇಶ್ವರ ಸಂಚಾರ ಠಾಣೆಯ ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.