
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಹೆಬ್ಬಾಳ ಸಂಚಾರ ಠಾಣೆ ವ್ಯಾಪ್ತಿಯ ಮೇಲ್ಸೇತುವೆ ಮೇಲೆ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ.
ವೈಯಾಲಿಕಾವಲ್ ನಿವಾಸಿ ಹರ್ಷ (31) ಮೃತ ಸವಾರ. ಇವರು ವೃತ್ತಿಯಲ್ಲಿ ಕಾರು ಡೀಲರ್ ಆಗಿದ್ದರು. ಹರ್ಷ ಅವರು ದ್ವಿಚಕ್ರ ವಾಹನದಲ್ಲಿ ಶನಿವಾರ ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಕೊಡಿಗೇಹಳ್ಳಿ ಮೇಲ್ಸೇತುವೆ ಮೇಲೆ ಹೋಗುತ್ತಿದ್ದರು. ಕೆಟ್ಟು ನಿಂತಿದ್ದ ಲಾರಿ ಗಮನಕ್ಕೆ ಬಾರದೆ ಡಿಕ್ಕಿ ಹೊಡೆದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದರು. ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು.
ಈ ಬಗ್ಗೆ ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.