ADVERTISEMENT

ರಾಮೇಶ್ವರಂ ಕೆಫೆ ಸ್ಫೋಟ |ಹೋಟೆಲ್‌ಗಳಲ್ಲಿ ಭದ್ರತೆ ಹೆಚ್ಚಿಸಲು ಚಿಂತನೆ

ಬೃಹತ್‌ ಬೆಂಗಳೂರು ಹೋಟೆಲ್‌ಗಳ ಸಂಘದ ಅಧ್ಯಕ್ಷ ಪಿ.ಸಿ. ರಾವ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2024, 15:27 IST
Last Updated 2 ಮಾರ್ಚ್ 2024, 15:27 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ‘ವೈಟ್‌ಫೀಲ್ಡ್‌ ಸಮೀಪದ ರಾಮೇಶ್ವರಂ ಕೆಫೆ ಹೋಟೆಲ್‌ನಲ್ಲಿ ನಡೆದ ಸ್ಫೋಟ ಹಿನ್ನೆಲೆಯಲ್ಲಿ ನಗರದ ಎಲ್ಲ ಹೋಟೆಲ್‌ಗಳಲ್ಲಿ ಭದ್ರತೆ ಹೆಚ್ಚಿಸಲು ಚಿಂತನ–ಮಂಥನ ಸಭೆ ಹಮ್ಮಿಕೊಳ್ಳಲಾಗುವುದು’ ಎಂದು ಬೃಹತ್‌ ಬೆಂಗಳೂರು ಹೋಟೆಲ್‌ಗಳ ಸಂಘದ ಅಧ್ಯಕ್ಷ ಪಿ.ಸಿ. ರಾವ್‌ ಹೇಳಿದರು.

‘ನಗರದಲ್ಲಿರುವ ಎಲ್ಲ ಹೋಟೆಲ್‌ಗಳ ಒಳಗಡೆ ಮತ್ತು ಹೊರಭಾಗದಲ್ಲಿ ಹೆಚ್ಚು ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳುವ ಕುರಿತು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಭದ್ರತಾ ಪರಿಣಿತರೊಂದಿಗೆ ಸಭೆ ನಡೆಸಲಾಗುವುದು. ಹೋಟೆಲ್‌ಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಹಾಗೂ ಗ್ರಾಹಕರ ಭದ್ರತೆಗೆ ಹೆಚ್ಚು ಆದ್ಯತೆ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ADVERTISEMENT

‘ನಗರದ ಎಲ್ಲ ಹೋಟೆಲ್‌ಗಳಲ್ಲಿ ಪ್ರಮಾಣಿತ ಕಾರ್ಯಚರಣೆ ವಿಧಾನವನ್ನು (ಎಸ್‌ಒಪಿ) ಅಳವಡಿಸಿಕೊಳ್ಳಲಾಗುವುದು. ಅದರಂತೆ ಹೋಟೆಲ್‌ಗಳಲ್ಲಿ ಪ್ರಾಥಮಿಕ ಹಂತದ ಭದ್ರತೆ ಅಳವಡಿಸಿಕೊಳ್ಳಲು ಸೂಚನೆ ನೀಡಲಾಗುವುದು. ರಾಮೇಶ್ವರಂ ಕೆಫೆ ಹೋಟೆಲ್‌ನಲ್ಲಿ ಬಾಂಬ್‌ ಸ್ಫೋಟ ಪ್ರಕರಣದ ಬಗ್ಗೆ ತನಿಖೆ ನಡೆಸಿ ಆರೋಪಿಯನ್ನು ಕೂಡಲೇ ಬಂಧಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.