ADVERTISEMENT

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಬೆಂಕಿಗೆ ಆಹುತಿ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2024, 5:07 IST
Last Updated 6 ಆಗಸ್ಟ್ 2024, 5:07 IST
ಬಿಎಂಟಿಸಿ ಎಲೆಕ್ಟ್ರಿಕ್ ಬಸ್
ಬಿಎಂಟಿಸಿ ಎಲೆಕ್ಟ್ರಿಕ್ ಬಸ್   

ಬೆಂಗಳೂರು: ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್‌ವೊಂದು ಬೆಂಕಿಗೆ ಆಹುತಿಯಾಗಿದೆ. ನಾಗಾವರದಿಂದ ಹೆಬ್ಬಾಳದ ಕಡೆಗೆ ಸೋಮವಾರ ತಡರಾತ್ರಿ ಸಂಚರಿಸುತ್ತಿದ್ದ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಬೆಂಕಿಗೆ ಆಹುತಿ ಆಯಿತು.

ತಡರಾತ್ರಿ ಸುರಿಯುತ್ತಿದ್ದ ಮಳೆಯ ನಡುವೆಯೂ ಬಸ್ ಸುಟ್ಟು ಹೋಗಿದೆ. ಬಸ್‌ನಲ್ಲಿ ಚಾಲಕ ಹಾಗೂ ನಿರ್ವಾಹಕ ಸೇರಿದಂತೆ ಇಪ್ಪತ್ತು ಮಂದಿ ಪ್ರಯಾಣಿಕರು ಇದ್ದರು. ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

ಎಲೆಕ್ಟ್ರಿಕ್ ಬಸ್‌ನಲ್ಲಿ ಉಂಟಾದ ಶಾರ್ಟ್ ಸರ್ಕಿಟ್‌ನಿಂರ ಅವಘಡ ಸಂಭವಿಸಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.