
ಪ್ರಜಾವಾಣಿ ವಾರ್ತೆ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಒರಾಯನ್ ಮಾಲ್, ಮಂತ್ರಿ ಸ್ಕ್ವೇರ್ ಸೇರಿದಂತೆ ಹಲವು ಕಡೆ ಬಾಂಬ್ ಸ್ಪೋಟಿಸುವುದಾಗಿ ಇ ಮೇಲ್ ಬೆದರಿಕೆ ಸಂದೇಶ ಕಳುಹಿಸಿರುವ ಸಂಬಂಧ ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೈಷ್–ಎ–ಮೊಹಮ್ಮದ್ ವೈಟ್ ಕಾಲರ್ ಟೆರರ್ ಟೀಂ ಹೆಸರಿನಲ್ಲಿ ನವೆಂಬರ್ 30ರ ಬೆಳಿಗ್ಗೆ 11.53ಕ್ಕೆ ನಗರ ಪೊಲಿಸ್ ಕಮಿಷನರ್‌ಗೆ ಇ– ಮೇಲ್ ಕಳುಹಿಸಲಾಗಿದೆ.
ವಿಮಾನ ನಿಲ್ದಾಣ, ಮಂತ್ರಿ ಸ್ಕ್ವೇರ್, ಲುಲು ಮಾಲ್, ಫೋರಂ ಸೌತ್ ಮಾಲ್‌ಗಳಲ್ಲಿ ರಾತ್ರಿ 7 ಗಂಟೆಗೆ ಬಾಂಬ್ ಸ್ಫೋಟಿಸಲಾಗುವುದು ಎಂಬುದಾಗಿ ಇ–ಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇ–ಮೇಲ್ ಕಳುಹಿಸಿರುವ ವ್ಯಕ್ತಿಯ ಪತ್ತೆಗೆ ಶೋಧ ಕಾರ್ಯ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.