ಸಾದರ ಸ್ವೀಕಾರ
ಆ.20ರಿಂದ ಪುಸ್ತಕಗಳ ಪ್ರದರ್ಶನ
ಬೆಂಗಳೂರು: 2022ರಲ್ಲಿ ಪ್ರಥಮ ಮುದ್ರಣಗೊಂಡ ಪುಸ್ತಕಗಳ ಆಯ್ಕೆ ಪ್ರಕ್ರಿಯೆಯನ್ನು ರಾಜ್ಯಮಟ್ಟದ ಆಯ್ಕೆ ಸಮಿತಿ ಪೂರ್ಣಗೊಳಿಸಿದೆ. ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ವಿಜಯನಗರದ ಎಂ.ಸಿ. ಬಡಾವಣೆಯ ವಿಷ್ಣುವರ್ಧನ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದಲ್ಲಿ ಆ.20 ರಿಂದ 22ರವರೆಗೆ ಏರ್ಪಡಿಸಲಾಗಿದೆ.
ಪ್ರತಿದಿನ ಬೆಳಿಗ್ಗೆ 10ರಿಂದ ಸಂಜೆ 5.30ರವರಗೆ ಪುಸ್ತಕ ಪ್ರದರ್ಶನ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರಾಜ್ಯದ ಎಲ್ಲ ಜಿಲ್ಲಾ, ನಗರ ಕೇಂದ್ರ ಗ್ರಂಥಾಲಯಗಳ ಉಪ ನಿರ್ದೇಶಕರು, ಮುಖ್ಯ ಗ್ರಂಥಾಲಯಗಳ ಕಚೇರಿಗಳಲ್ಲಿ ಪ್ರದರ್ಶಿಸಲಾಗುವುದು. ಇಲಾಖೆಯ ಅಧಿಕೃತ ವೆಬ್‍ಸೈಟ್ www.dpl.karnataka.gov.inನಲ್ಲಿ ಪ್ರಕಟಿಸಲಾಗುವುದು.
ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 30ರ ಒಳಗೆ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು – 560001 ಇಲ್ಲಿಗೆ ಲಿಖಿತವಾಗಿ ಸಲ್ಲಿಸಲು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಮುಖ್ಯ ಗ್ರಂಥಾಲಯ ಅಧಿಕಾರಿ ಅನಿತಾ ಆರ್. ತಿಳಿಸಿದ್ದಾರೆ.
ಟೂಲ್ ಡಿಸೈನ್ ಕೋರ್ಸ್
ಬೆಂಗಳೂರು: ಬೆಂಗಳೂರಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ 2025-26ನೇ ಸಾಲಿನ ‘ಪೋಸ್ಟ್ ಡಿಪ್ಲೊಮಾ ಇನ್ ಟೂಲ್ ಡಿಸೈನ್’ ಕೋರ್ಸ್‌ಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಡಿಎಂಇ, ಡಿಟಿಡಿಎಂ, ಬಿಇ (ಮೆಕ್ಯಾನಿಕಲ್, ಇಂಡಸ್ಟ್ರಿಯಲ್ ಆ್ಯಂಡ್ ಮ್ಯಾನುಫ್ಯಾಕ್ಚರಿಂಗ್, ಇಂಡಸ್ಟ್ರಿಯಲ್ ಆ್ಯಂಡ್ ಪ್ರೊಡಕ್ಷನ್, ಅಟೊಮೊಬೈಲ್ ಎಂಜಿನಿಯರಿಂಗ್) ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಪ್ರಾಂಶುಪಾಲರು ಪಿಜಿ/ಪಿಡಿ ಸ್ಟಡೀಸ್ ಕೇಂದ್ರ, ರಾಜಾಜಿನಗರ, ಬೆಂಗಳೂರು. ಮೊಬೈಲ್: 9141629584, 9880217473, ವೆಬ್‍ಸೈಟ್: https://gttc.karnataka.gov.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಅರ್ಜಿ ಆಹ್ವಾನ
ಬೆಂಗಳೂರು: ಬೆಂಗಳೂರಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ‘ಎಂ-ಟೆಕ್ ಇನ್ ಟೂಲ್ ಎಂಜಿನಿಯರಿಂಗ್’ ಕೋರ್ಸಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಿಇ ಮೆಕ್ಯಾನಿಕಲ್ ಎಂಜಿನಿಯರಿಂಗ್, ಅಟೊಮೊಬೈಲ್ ಎಂಜಿನಿಯರಿಂಗ್, ಆಟೊಮೇಷನ್ ಆ್ಯಂಡ್ ರೊಬೊಟಿಕ್ ಎಂಜಿನಿಯರಿಂಗ್, ಇಂಡಸ್ಟ್ರಿಯಲ್ ಆ್ಯಂಡ್ ಪ್ರೊಡಕ್ಷನ್ ಎಂಜಿನಿಯರಿಂಗ್, ಮೆಕ್ಯಾಟ್ರಾನಿಕ್ಸ್ ಎಂಜಿನಿಯರಿಂಗ್ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
ಮಾಹಿತಿಗೆ ಮತ್ತು ಅರ್ಜಿ ಸಲ್ಲಿಸಲು ಪ್ರಾಂಶುಪಾಲರು ಪಿಜಿ/ಪಿಡಿ ಸ್ಟಡೀಸ್ ಕೇಂದ್ರ, ರಾಜಾಜಿನಗರ, ಬೆಂಗಳೂರು. ಮೊಬೈಲ್: 9141629584, 9880217473, ವೆಬ್‍ಸೈಟ್: https://gttc.karnataka.gov.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಬಿಎಂಶ್ರೀ ಪ್ರತಿಷ್ಠಾನಕ್ಕೆ ಆಯ್ಕೆ
ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನದ ಕಾರ್ಯಕಾರಿ ಸಮಿತಿಗೆ ಸಾಹಿತಿ ಸಿಸಿರಾ ಸೇರಿದಂತೆ ಐದು ಜನರು ಆಯ್ಕೆಯಾಗಿದ್ದಾರೆ.
2025--28ರ ಅವಧಿಗೆ ಕಾರ್ಯಕಾರಿ ಸಮಿತಿಯ ಐದು ಸ್ಥಾನಗಳಿಗೆ ಇತ್ತೀಚೆಗೆ ಚುನಾವಣೆ ಮೂಲಕ ಆಯ್ಕೆ ಮಾಡಲಾಯಿತು ಎಂದು ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ, ಕಾರ್ಯದರ್ಶಿ ಶಾಂತರಾಜು ತಿಳಿಸಿದ್ದಾರೆ.
ಎಸ್.ರಾಮಲಿಂಗೇಶ್ವರ (ಸಿಸಿರಾ), ಜಿ. ಅಶ್ವತ್ಥನಾರಾಯಣ, ಎಸ್.ಜಿ. ಮಾಲತಿ ಶೆಟ್ಟಿ, ಬಿ.ಆರ್. ರವೀಂದ್ರನಾಥ್, ಸಂಗಮೇಶ್ ಬಾದವಾಡಗಿ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.