ADVERTISEMENT

ನಾಳೆಯಿಂದ ‘ಬೆಂಗಳೂರು ಪುಸ್ತಕೋತ್ಸವ’

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2019, 19:02 IST
Last Updated 30 ಸೆಪ್ಟೆಂಬರ್ 2019, 19:02 IST

ಬೆಂಗಳೂರು: ‘ಬೆಂಗಳೂರು ಪುಸ್ತಕ ವ್ಯಾಪಾರಿಗಳು ಮತ್ತು ಪ್ರಕಾಶಕರ ಸಂಘ ಹಾಗೂ ಇಂಡಿಯಾ ಕಾಮಿಕ್ಸ್ ಸಹ
ಯೋಗದಲ್ಲಿ ಅ.2ರಿಂದ 8ರವರೆಗೆ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಪುಸ್ತಕೋತ್ಸವ ನಡೆಯಲಿದೆ’ ಎಂದು ಸಂಘದ ಅಧ್ಯಕ್ಷ ಎ.ಎನ್.ರಾಮಚಂದ್ರನ್ ತಿಳಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪುಸ್ತಕೋತ್ಸವದಲ್ಲಿ 250ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ. ಕನ್ನಡ, ತಮಿಳು, ತೆಲುಗು, ಬಂಗಾಳಿ, ಸಂಸ್ಕೃತ, ಇಂಗ್ಲಿಷ್, ಹಿಂದಿ ಹಾಗೂ ವಿವಿಧ ಭಾಷೆಗಳ ಪುಸ್ತಕಗಳು ಲಭ್ಯ. ಪ್ರತಿದಿನ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದರು.

‘ಪುಸ್ತಕೋತ್ಸವವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಭಾಸ್ಕರ್ ರಾವ್, ಜೈನ್‌ ಸಮೂಹ ಸಂಸ್ಥೆಗಳ ಅಧ್ಯಕ್ಷ ಚನರಾಜ್‌ ರಾಯ್‌ಚಂದ್‌ ಭಾಗವಹಿಸಲಿದ್ದಾರೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.