ಸಾವು
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ನಗರತ್‌ಪೇಟೆಯ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ರಾಜಸ್ಥಾನ ಮೂಲದ ಮದನ್ ಅವರು ಸಜೀವದಹನವಾಗಿದ್ದಾರೆ.
ಮಹಿಳೆ ಹಾಗೂ ಇಬ್ಬರು ಮಕ್ಕಳು ಕಟ್ಟಡದ ಒಳಗೆ ಸಿಲುಕಿರುವ ಶಂಕೆಯಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ನಾಲ್ಕು ತಾಸು ಕಾರ್ಯಾಚರಣೆ ನಡೆಸಿದರೂ ಮೂವರ ಸುಳಿವು ಸಿಕ್ಕಿಲ್ಲ. ಕಾರ್ಯಾಚರಣೆ ಮುಂದುವರೆದಿದೆ.
ಶನಿವಾರ ಮುಂಜಾನೆ ಈ ಬೆಂಕಿ ಅವಘಡ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದಿರುವ ಅಗ್ನಿಶಾಮಕದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.
ಮೂರು ಅಂತಸ್ತಿನ ಕಟ್ಟಡದಲ್ಲಿ ಫ್ಲೋರ್‌ಮ್ಯಾಟ್ ತಯಾರಿಸುವ ಘಟಕವಿತ್ತು. ಮೊದಲಿಗೆ ಅಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದೆ.
ಶುಕ್ರವಾರ ಆಡುಗೋಡಿಯ ಶ್ರೀರಾಮ ಕಾಲೊನಿಯಲ್ಲಿ ಘಟನೆ ನಡೆದು ಬಾಲಕ ಮೃತಪಟ್ಟಿದ್ದ. ಇಂದು ಅದೇ ಮಾದರಿಯಲ್ಲಿ ಅನಾಹುತ ಸಂಭವಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.