
ಪ್ರಜಾವಾಣಿ ವಾರ್ತೆ
ಪ್ರಜಾವಾಣಿ ಚಿತ್ರ/ ವಿ.ಪುಷ್ಕರ್
ಬೆಂಗಳೂರು: ನಗರದ ಮೈಸೂರು ರಸ್ತೆಯ ಬಾಲಗಂಗಾಧರನಾಥ ಮೇಲ್ಸೇತುವೆಯಲ್ಲಿ ಮುಂದೆ ಸಾಗುತ್ತಿದ್ದ ವಾಹನಗಳನ್ನು ಹಿಂದಿಕ್ಕುವ ವೇಳೆ ಸರ್ಕಾರಿ ಇಲಾಖೆಗೆ ಬುಲೆರೊ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ಮೇಲೆ ಏರಿತ್ತು.
ಪರಿಣಾಮ ಈ ಮಾರ್ಗದಲ್ಲಿ ಸ್ವಲ್ಪ ಸಮಯ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ವಿಭಜಕ ಏರಿದ ಶಾಲಾ ಬಸ್...
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಚೈತನ್ಯ ಟೆಕ್ನೊಗೆ ಸೇರಿದ ಬಸ್‌ವೊಂದು ಬೆಂಗಳೂರಿನ ಹೆಣ್ಣೂರು ಮುಖ್ಯರಸ್ತೆಯ ಡಿ ಮಾರ್ಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ವಿಭಜಕ ಏರಿತ್ತು. ಚಾಲಕನಿಗೆ ಸಣ್ಣ ಗಾಯವಾಗಿದ್ದು, ವಿದ್ಯಾರ್ಥಿಗಳು ಪಾರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.