ಅಪಘಾತ, –ಪ್ರಾತಿನಿಧಿಕ ಚಿತ್ರ
–ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಮದ್ಯದ ಅಮಲಿನಲ್ಲಿ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಬಿದ್ದ ವ್ಯಕ್ತಿಯ ಮೇಲೆ ಬಸ್ ಹರಿದ ಪರಿಣಾಮ ಆತ ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಬಳಿಕ ಪರಾರಿಯಾಗಿದ್ದ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಮದ್ಯ ಕುಡಿದು ಡಿಸೆಂಬರ್ 13ರ ರಾತ್ರಿ ಹೆಗ್ಗನಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಚೇತನ್ ಕುಮಾರ್ ಎಂಬುವರು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಅದೇ ವೇಳೆ ಹಿಂಬದಿಯಿಂದ ಬಂದ ಖಾಸಗಿ ಬಸ್ ಅವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟರು.
ಅಪಘಾತ ನಡೆದ ಬಳಿಕ ಬಸ್ ಚಾಲಕ ನರೇಂದ್ರ ಸ್ಥಳದಿಂದ ಪರಾರಿಯಾಗಿದ್ದರು. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಗಳ ಪರಿಶೀಲನೆ ನಡೆಸಿ, ಪೀಣ್ಯದಲ್ಲಿ ಚಾಲಕನನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ
ಘಟನೆಗೆ ಸಂಬಂಧಿಸಿದಂತೆ ಬಸ್ ಜಪ್ತಿ ಮಾಡಲಾಗಿದ್ದು, ಪ್ರಕರಣ ದಾಖಲಾಗಿದೆ ಎಂದು ಪಶ್ಚಿಮ ವಿಭಾಗದ (ಸಂಚಾರ) ಡಿಸಿಪಿ ಅನೂಪ್ ಎ. ಶೆಟ್ಟಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.