ADVERTISEMENT

ಬೆಂಗಳೂರು ಬ್ಯುಸಿನೆಸ್ ಕಾರಿಡಾರ್: ಇಂದು ಬಿಡಿಎ ಸಭೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2025, 23:30 IST
Last Updated 24 ಸೆಪ್ಟೆಂಬರ್ 2025, 23:30 IST
<div class="paragraphs"><p>ರಾಮಪ್ರಸಾತ್‌ ಮನೋಹರ್</p></div>

ರಾಮಪ್ರಸಾತ್‌ ಮನೋಹರ್

   

ಬೆಂಗಳೂರು: ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (ಪಿಆರ್‌ಆರ್) ಯೋಜನೆಗೆ ಸಂಬಂಧಿಸಿದಂತೆ ಸೆ.25ರಂದು ಬೆಳಿಗ್ಗೆ 11ಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕೇಂದ್ರ ಕಚೇರಿಯಲ್ಲಿ ರೈತರು ಹಾಗೂ ನಿವೇಶನದಾರರ ಸಂಘದ ಪದಾಧಿಕಾರಿಗಳು ಹಾಗೂ ಭೂಮಾಲೀಕರ ಸಭೆ ಕರೆಯಲಾಗಿದೆ.

ಯೋಜನೆಗೆ ಸಂಬಂಧಿಸಿದಂತೆ ಆಗಿರುವ ಪ್ರಗತಿಯ ಬಗ್ಗೆ ಸಭೆ ನಡೆಸಿ ಮಾಹಿತಿ ನೀಡಲು ಮನವಿಗಳು ಬಂದಿರುವ ಕಾರಣ ಈ ಸಭೆ ಕರೆಯಲಾಗಿದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ADVERTISEMENT

ನೆಲಮಂಗಲ ಯೋಜನಾ ಪ್ರಾಧಿಕಾರಕ್ಕೆ ನೇಮಕ

ನೆಲಮಂಗಲ: ನೆಲಮಂಗಲ ಯೋಜನಾ ಪ್ರಾಧಿಕಾರಕ್ಕೆ ಎಂ.ಕೆ.ನಾಗರಾಜು ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಎಂ.ವೆಂಕಟೇಶ್‌, ಎಲ್‌.ಎಸ್‌.ಪ್ರಕಾಶ್‌, ಎಚ್‌.ಆಂಜಿನಮೂರ್ತಿ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ಜಲಮಂಡಳಿ ಫೋನ್ ಇನ್ ನಾಳೆ

ಬೆಂಗಳೂರು: ಬೆಂಗಳೂರು ಜಲಮಂಡಳಿ ಅಧ್ಯಕ್ಷ ವಿ.ರಾಮ್ ಪ್ರಸಾತ್ ಮನೋಹರ್
ಅಧ್ಯಕ್ಷತೆಯಲ್ಲಿ ಸೆ.26ರ ಶುಕ್ರವಾರ ಬೆಳಿಗ್ಗೆ 9.30 ರಿಂದ 10.30ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.

ದೂರವಾಣಿ ಸಂಖ್ಯೆ; 080-22945119, 080-22229639. ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆ
ಯೊಂದಿಗೆ ದೂರು ನೀಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.