ಬಿಬಿಎಂಪಿ
ಬೆಂಗಳೂರು: ಜೆ.ಪಿ ನಗರದ ಸಿಂಧೂರ ಕಲ್ಯಾಣ ಮಂಟಪದ ಸುತ್ತಮುತ್ತಲಿನ ಪ್ರದೇಶದಲ್ಲಿ ರಾಜಕಾಲುವೆ ಕಾಮಗಾರಿಯನ್ನು ವರ್ಷಾಂತ್ಯಕ್ಕೆ ಪೂರ್ಣಗೊಳಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ದಕ್ಷಿಣ ವಲಯ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಿಂಧೂರ ಕಲ್ಯಾಣ ಮಂಟಪದಿಂದ ಕೆ-210ಕ್ಕೆ ಸಂಪರ್ಕ ಕಲ್ಪಿಸಲು 1.3 ಕಿ.ಮೀ ಉದ್ದದ ಮಳೆ ನೀರು ಹರಿಯುವ ರಾಜಕಾಲುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಪ್ರವಾಹ ಆಗುವುದನ್ನು ತಪ್ಪಿಸಬೇಕು ಎಂದರು.
ಹೊರ ವರ್ತುಲ ರಸ್ತೆಯ ಚರಂಡಿಗಳಲ್ಲಿ ಹೂಳೆತ್ತಿ ಸ್ವಚ್ಛತೆ ಕಾಪಾಡಬೇಕು. ಚರಂಡಿಗಳಿಂದ ತೆಗೆದ ಹೂಳನ್ನು ಸ್ಥಳದಲ್ಲಿಯೇ ಬಿಡದೆ ಕೂಡಲೇ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.
ಜಯನಗರದ 3ನೇ ಬ್ಲಾಕ್‌ನಲ್ಲಿ 5 ಟನ್ ಸಾಮರ್ಥ್ಯದ ಘನತ್ಯಾಜ್ಯ ಜೈವಿಕ ಅನಿಲ ಘಟಕವಿದೆ. ಇಂತಹ ಘಟಕಗಳನ್ನು ನಗರದ ಇತರೆ ಭಾಗಗಳಲ್ಲಿ ಸ್ಥಾಪಿಸಬೇಕು. ಕೆ.ಆರ್. ಮಾರುಕಟ್ಟೆಯಲ್ಲಿ ಸ್ಥಾಪಿಸಿದರೆ, ತ್ಯಾಜ್ಯ ನಿರ್ವಹಣಾ ಸಮಸ್ಯೆ ಬಗೆಹರಿಸಬಹುದು ಎಂದರು.
ವಿಲ್ಸನ್ ಗಾರ್ಡನ್ ಬಳಿಯಿರುವ ವಿದ್ಯುತ್ ಚಿತಾಗಾರಕ್ಕೆ ಅಂತ್ಯಕ್ರಿಯೆ ಮಾಡಲು ಬರುವವರಿಗಾಗಿ ಮೂಲಸೌಕರ್ಯಗಳ ವ್ಯವಸ್ಥೆ ಮಾಡಬೇಕು. ಅಲ್ಲದೇ ಹೆಚ್ಚುವರಿಯಾಗಿ ಎರಡು ಫರ್ನೆಸ್ ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.