ADVERTISEMENT

ಬೆಂಗಳೂರು | ಕಾರಿಗೆ ಬೆಂಕಿ: ಶಾರ್ಟ್ ಸರ್ಕಿಟ್ ಶಂಕೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2026, 14:32 IST
Last Updated 19 ಫೆಬ್ರುವರಿ 2026, 14:32 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಮೆಜೆಸ್ಟಿಕ್‌ ಬಳಿಯ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿದ್ದ ಕಾರೊಂದು ಬೆಂಕಿಗೆ ಆಹುತಿಯಾಗಿದೆ. ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಕಿ ಅವಘಡದಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ADVERTISEMENT

ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ್ದ ಸ್ಥಳೀಯರು, ಅಗ್ನಿಶಾಮಕ ಹಾಗೂ ತುರ್ತುಸೇವಾ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಕಾರು ಸುಟ್ಟು ಹೋಗಿತ್ತು. ಕಾರಿನ ಪಕ್ಕದಲ್ಲಿದ್ದ ಇತರೆ ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. 

ಘಟನೆಗೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಘಟನೆ ಸಂಬಂಧ ಮಾಹಿತಿ ಪಡೆದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.