ADVERTISEMENT

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮೇಲೆ ಸಿಸಿಬಿ ದಿಢೀರ್ ದಾಳಿ

​ಪ್ರಜಾವಾಣಿ ವಾರ್ತೆ
Published 10 ಜುಲೈ 2021, 3:47 IST
Last Updated 10 ಜುಲೈ 2021, 3:47 IST
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ಶನಿವಾರ ನಸುಕಿನಲ್ಲಿ ದಿಢೀರ್ ದಾಳಿ ಮಾಡಿದರು.
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ಶನಿವಾರ ನಸುಕಿನಲ್ಲಿ ದಿಢೀರ್ ದಾಳಿ ಮಾಡಿದರು.   

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ಶನಿವಾರ ನಸುಕಿನಲ್ಲಿ ದಿಢೀರ್ ದಾಳಿ ಮಾಡಿದರು.

ಕಾರಾಗೃಹದಲ್ಲಿರುವ ಕೈದಿಗಳು ಮೊಬೈಲ್ ಬಳಸುತ್ತಿದ್ದಾರೆ. ಅಲ್ಲಿಂದಲೇ ಅಪರಾಧ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಹಾಗೂ ಮಾದಕ ವಸ್ತು ಸೇವಿಸುತ್ತಿದ್ದ ಮಾಹಿತಿ ಇತ್ತು.

ಅದೇ ಕಾರಣಕ್ಕೆ ಸಿಸಿಬಿ ವಿಶೇಷ ತಂಡಗಳು, ಜೈಲಿನೊಳಗೆ ದಾಳಿ ಮಾಡಿ ಎಲ್ಲ ಬ್ಯಾರಕ್‌ಗಳಲ್ಲಿ ತಪಾಸಣೆ ನಡೆಸಿದವು. ಮೊಬೈಲ್‌ಗಳು, ಸಿಮ್ ಕಾರ್ಡ್‌ಗಳು, ಗಾಂಜಾ, ಚಾಕು ಸೇರಿದಂತೆ ಹಲವು ವಸ್ತುಗಳು ಕೈದಿಗಳ ಬಳಿ ಸಿಕ್ಕಿವೆ.

ADVERTISEMENT

'ಹೊರಗಿನಿಂದ ಮಾದಕ ವಸ್ತು ಜೈಲಿನೊಳಗೆ ಪೂರೈಕೆ ಆಗುತ್ತಿರುವುದು ಗೊತ್ತಾಗಿದೆ. ಈ ಬಗ್ಗೆ ಜೈಲು ಸಿಬ್ಬಂದಿಯನ್ನು ವಿಚಾರಣೆ ನಡೆಸಬೇಕಿದೆ' ಎಂದು ಸಿಸಿಬಿ ಮೂಲಗಳು ಹೇಳಿವೆ.

ರೌಡಿಗಳ‌ ಮನೆ ಮೇಲೂ ದಾಳಿ: ಬೆಂಗಳೂರಿನ ಹಲವು ರೌಡಿಗಳ‌ ಮನೆಗಳ‌‌ ಮೇಲೂ ಪೊಲೀಸರು ದಾಳಿ‌ ಮಾಡಿದ್ದಾರೆ. ಮಾರಕಾಸ್ತ್ರ ಹಾಗೂ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.