ಬೆಂಗಳೂರು: ಅಪಾರ್ಟ್‌ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಯುವಕನನ್ನು ಕುಂಬಳಗೋಡು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರ್ಯನ್ ಕುಮಾರ್ (25) ಬಂಧಿತ ಆರೋಪಿ. ಬಾಲಕಿ ಹಾಗೂ ಆರೋಪಿ ಒಂದೇ ಅಪಾರ್ಟ್‌ಮೆಂಟ್‌ನಲ್ಲಿ ಬೇರೆ ಬೇರೆ ಫ್ಲ್ಯಾಟ್‌ನಲ್ಲಿ ವಾಸವಿದ್ದರು. ಆರೋಪಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಪೋಷಕರು ಇಲ್ಲದ ಸಂದರ್ಭದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಇದೆ. ಬಾಲಕಿ ಪೋಷಕರು ನೀಡಿದ ದೂರು ಆಧರಿಸಿ ಪೋಕ್ಸೊ(ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.