ಬೆಂಗಳೂರು: ಕ್ರೈಸ್ಟ್ ವಿಶ್ವವಿದ್ಯಾಲಯ 50ನೇ ವರ್ಷಕ್ಕೆ ಕಾಲಿರಿಸಿದ್ದು, ಜುಲೈ 14ರಂದು ಸುವರ್ಣ ಮಹೋತ್ಸವ ಸಮಾರಂಭ ಹಮ್ಮಿಕೊಂಡಿದೆ. ಸಮಾರಂಭವನ್ನು ನೊಬೆಲ್ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಉದ್ಘಾಟಿಸಲಿದ್ದು, ಮೈಸೂರಿನ ರಾಜವಂಶಸ್ಥ ಯದುವೀರ ಕೃಷ್ಣದತ್ತ ಒಡೆಯರ್ ದಂಪತಿ, ಶಾಸಕ ರಾಮಲಿಂಗಾರೆಡ್ಡಿ, ಕಾಲೇಜಿನ ನಿವೃತ್ತ ಪ್ರಾಂಶುಪಾಲ ಆ್ಯಂಟನಿ ಕಾರಿಯಿಲ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜುಲೈ 21ರಂದು ವಿವಿ ವಾರ್ಷಿಕೋತ್ಸವ ನಡೆಯಲಿದೆ ಎಂದು ಕುಲಪತಿ ಫಾ.ಅಬ್ರಹಾಂತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.