
ಸಾಂದರ್ಭಿಕ ಚಿತ್ರ
– ಐಸ್ಟಾಕ್ ಚಿತ್ರ
ಬೆಂಗಳೂರು: ಚಿತ್ರಮಂದಿರವೊಂದರ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅನ್ನು ರಹಸ್ಯವಾಗಿ ಇಟ್ಟು ಚಿತ್ರೀಕರಣ ಮಾಡುತ್ತಿದ್ದ ನೇಪಾಳದ ಬಾಲಕನನ್ನು ಮಡಿವಾಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಡಿವಾಳದ ಬಿ.ಪಿ ರಸ್ತೆಯಲ್ಲಿರುವ ಚಿತ್ರಮಂದಿರದಲ್ಲಿ ವ್ಯಕ್ತಿಯೊಬ್ಬರು ಹೌಸ್‌ಕೀಪಿಂಗ್ ಕೆಲಸ ಮಾಡುತ್ತಿದ್ದರು. ಅವರ ಅಣ್ಣನ ಮಗ (14 ವರ್ಷ) ಇತ್ತೀಚೆಗೆ ಮನೆಗೆ ಬಂದಿದ್ದ. ಹೌಸ್‌ಕೀಪಿಂಗ್ ಕೆಲಸಕ್ಕೆ ಹೋಗುವಾಗ ಬಾಲಕನನ್ನು ಜತೆಯಲ್ಲಿ ಕರೆದುಕೊಂಡು ಹೋಗಿದ್ದರು. ಆಗ ಬಾಲಕ ಮೊಬೈಲ್ ತೆಗೆದುಕೊಂಡು ಹೋಗಿ ಕ್ಯಾಮೆರಾ ಆನ್ ಮಾಡಿ ಶೌಚಾಲಯದಲ್ಲಿಇಟ್ಟಿದ್ದ. ಸಿನಿಮಾ ವೀಕ್ಷಣೆಗೆಂದು ಮಹಿಳೆಯೊಬ್ಬರು ಮಧ್ಯಂತರದ ಅವಧಿಯಲ್ಲಿ ಶೌಚಾಲಯಕ್ಕೆ ತೆರಳಿದ್ದರು. ಮೊಬೈಲ್ ಇಟ್ಟು ರಹಸ್ಯವಾಗಿ ಚಿತ್ರೀಕರಣ ಮಾಡುತ್ತಿರುವುದು ಗಮನಿಸಿದ್ದರು. ತಕ್ಷಣವೇ ಚಿತ್ರಮಂದಿರದ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು, ಬಾಲಕನನ್ನು ವಶಕ್ಕೆ ಪಡೆದುಕೊಂಡು ಬಂಧಿಸಿದರು ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.