ADVERTISEMENT

ಕಾಲೇಜು ಮಾನ್ಯತೆಗಾಗಿ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 6 ಜುಲೈ 2021, 15:03 IST
Last Updated 6 ಜುಲೈ 2021, 15:03 IST

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯ13 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಎಲ್ಲಾ ಕಾಲೇಜುಗಳ ಮಾನ್ಯತೆ ನವೀಕರಿಸಲು ಆನ್‌ಲೈನ್‌ ಅರ್ಜಿಗಳನ್ನು ಆಹ್ವಾನಿಸಿದೆ.

2021–22ನೇ ಶೈಕ್ಷಣಿಕ ಸಾಲಿನಲ್ಲಿಹೊಸದಾಗಿ ಕಾಲೇಜು ಆರಂಭಿಸಲು,ಹೆಚ್ಚುವರಿ ಕೋರ್ಸ್‌ ಅಥವಾ ಸ್ನಾತಕೋತ್ತರ ಕೋರ್ಸ್‌ ಪ್ರಾರಂಭಿಸಲು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು, ಶಾಶ್ವತ ಮಾನ್ಯತೆ ಪಡೆಯಲು, ಹೆಸರು ಮತ್ತು ಆಡಳಿತ ಬದಲಾವಣೆ, ಕಾಲೇಜುಗಳ ಸ್ಥಳಾಂತರ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗಾಗಿ www.onlineaffiliation.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

ಈ ತಿಂಗಳ31ರೊಳಗೆ ದಂಡ ಶುಲ್ಕವಿಲ್ಲದೆ ಅರ್ಜಿಗಳನ್ನು ಹಾಕಬಹುದು.₹1,000 ದಂಡ ಶುಲ್ಕದೊಂದಿಗೆ ಆಗಸ್ಟ್‌ 7ರವರೆಗೆ ಅರ್ಜಿ ಸಲ್ಲಿಸಬಹುದು. ಭರ್ತಿ ಮಾಡಿದ ಆನ್‌ಲೈನ್‌ ಅರ್ಜಿಗಳ ಮೂರು ಕಚ್ಚಾ ಪ್ರತಿಗಳನ್ನು ಆಗಸ್ಟ್‌16ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.