
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ ನಾಲ್ಕು ಚಕ್ರದ ಇವಿ-ಗೂಡ್ಸ್ ವಾಹನ ಖರೀದಿಸಲು ಸಾಲ ಮತ್ತು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ₹3 ಲಕ್ಷದೊಳಗಿರಬೇಕು. ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಮಾರ್ಚ್ 8ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಮಾಹಿತಿಗೆ: 080-223539601 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.