ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಸುಧಾಮನಗರದಲ್ಲಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಂಪ್ಯೂಟರ್ ಆಪರೇಟರ್ ಪ್ರದೀಪ್ (30) ಮೃತ ವ್ಯಕ್ತಿ. ಮದ್ಯವ್ಯಸನಿಯಾಗಿದ್ದ ಪ್ರದೀಪ್, ನಿತ್ಯ ಮದ್ಯ ಸೇವಿಸುತ್ತಿದ್ದರು. ಕುಟುಂಬದ ಸದಸ್ಯರೆಲ್ಲಾ ಗಣೇಶ ಹಬ್ಬದ ಆಚರಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ವೇಳೆ ತಮ್ಮ ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಸಾಲಬಾಧೆಯಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ ಎಂದು ಪೊಲೀಸರು ಹೇಳಿದ್ದಾರೆ. ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.