ಅಮಾನತು
ಬೆಂಗಳೂರು: ಮಾಂಸದ ಹೋಟೆಲ್‌ನಲ್ಲಿ ಮದ್ಯಪಾನಕ್ಕೆ ಅವಕಾಶ ಮಾಡಿಕೊಟ್ಟಿರುವುದನ್ನು ಪ್ರಶ್ನಿಸಿದ್ದ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಮೇಲೆ ಹಲ್ಲೆಗೆ ಮುಂದಾಗಿದ್ದ ಕಾನ್‌ಸ್ಟೆಬಲ್‌ನನ್ನು ಅಮಾನತು ಮಾಡಲಾಗಿದೆ.
ಚಾಮರಾಜಪೇಟೆ ಠಾಣೆ ಕಾನ್‌ಸ್ಟೆಬಲ್ ಮಧೂಸೂದನ್ ಅಮಾನತುಗೊಂಡವರು.
ಆಗಸ್ಟ್ 24ರಂದು ಮಾಗಡಿ ರಸ್ತೆಯಲ್ಲಿನ ಮಾಂಸದ ಹೋಟೆಲ್‌ನಲ್ಲಿ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟಿರುವುದನ್ನು ಪ್ರಶ್ನಿಸಿದ್ದ ಇನ್‌ಸ್ಪೆಕ್ಟರ್ ಗೋವಿಂದರಾಜು ಮೇಲೆ ಹೋಟೆಲ್ ಮಾಲೀಕ ಮಂಜುನಾಥ್ ಅವರ ಸಹೋದರ, ಕಾನ್‌ಸ್ಟೆಬಲ್ ಮಧುಸೂದನ್ ಸ್ಥಳಕ್ಕೆ ಬಂದು, ಇನ್‌ಸ್ಪೆಕ್ಟರ್ ಜತೆ ವಾಗ್ವಾದ ನಡೆಸಿದ್ದರು. ಅಲ್ಲದೇ ಹಲ್ಲೆ ನಡೆಸಲು ಮುಂದಾಗಿದ್ದರು.
ಕೆ.ಪಿ ಅಗ್ರಹಾರ ಠಾಣೆಯಲ್ಲಿ ಇಬ್ಬರ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಇಬ್ಬರನ್ನೂ ವಶಕ್ಕೆ ಪಡೆದಿದ್ದ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಘಟನೆ ಬಗ್ಗೆ ತನಿಖೆ ನಡೆಸಿದ ಡಿಸಿಪಿ, ಕಾನ್‌ಸ್ಟೆಬಲ್‌ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.