ADVERTISEMENT

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2025, 14:33 IST
Last Updated 11 ಅಕ್ಟೋಬರ್ 2025, 14:33 IST
   

ಬೆಂಗಳೂರು: ನಿರ್ಮಾಣ ಹಂತದ ಅಪಾರ್ಟ್‌ಮೆಂಟ್‌ವೊಂದರಿಂದ 13ನೇ ಮಹಡಿಯಿಂದ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಪಶ್ಚಿಮ ಬಂಗಾಳದ ಸೋನ್‌ಪುರ್ ಮೂಲದ ಅಮೀರ್ ಹುಸೇನ್ (33) ಹಾಗೂ ಮುಮ್ತಾಜ್ ಅಲಿ (28) ಮೃತರು. ಶುಕ್ರವಾರ ಮಧ್ಯಾಹ್ನ ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಖಾಸಗಿ ಕಂಪನಿಯೊಂದರ ಅಪಾರ್ಟ್‌ಮೆಂಟ್‌ ನಿರ್ಮಾಣ ಕೆಲಸವನ್ನು ಇಂಪೀರಿಯಲ್ ಬಿಲ್ಡ್ ಟೆಕ್ ಪ್ರೈವೇಟ್ ಲಿಮಿಟೆಡ್‌ಗೆ ಗುತ್ತಿಗೆಗೆ ವಹಿಸಲಾಗಿತ್ತು. ಶುಕ್ರವಾರ ಮಧ್ಯಾಹ್ನ ಕಟ್ಟಡದ 13ನೇ ಮಹಡಿಯ ಬಾಲ್ಕನಿಯಲ್ಲಿ ನಿಂತು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಬಾಲ್ಕನಿ ಕುಸಿದ ಪರಿಣಾಮ ಇಬ್ಬರೂ ಕೆಳಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ADVERTISEMENT

ಸೂಕ್ತ ಭದ್ರತೆ ವಹಿಸದೆ ನಿರ್ಲಕ್ಷ್ಯತನದಿಂದ ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾದ ಆರೋಪದ ಅಡಿ ಗುತ್ತಿಗೆದಾರರು ಹಾಗೂ ಸೈಟ್ ಎಂಜಿನಿಯರ್‌ ವಿರುದ್ಧ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.