ADVERTISEMENT

ಬೆಂಗಳೂರು: ಕೋವಿಡ್‌ ಗುಣಮುಖರ ಸಂಖ್ಯೆ 50 ಸಾವಿರದತ್ತ

ಕೊರೊನಾ ಸೋಂಕಿತರ ಸಂಖ್ಯೆ 84 ಸಾವಿರಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2020, 23:29 IST
Last Updated 14 ಆಗಸ್ಟ್ 2020, 23:29 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   
""

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರಲ್ಲಿ ಮತ್ತೆ 2,146 ಮಂದಿ ಗುಣಮುಖರಾಗಿದ್ದಾರೆ. ಇದರಿಂದಾಗಿ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 50 ಸಾವಿರದತ್ತ (49,392) ದಾಪುಗಾಲು ಇರಿಸಿದೆ.

ಈ ತಿಂಗಳು ಕೇವಲ14 ದಿನಗಳಲ್ಲಿ 32,496 ಮಂದಿ ಗುಣಮುಖರಾಗಿದ್ದಾರೆ. ಪ್ರತಿನಿತ್ಯ ಸರಾಸರಿ 2,321 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಹೀಗಾಗಿ ಶನಿವಾರ ಗುಣಮುಖರ ಸಂಖ್ಯೆ 50 ಸಾವಿರದ ಗಡಿ ದಾಟುವ ಸಾಧ್ಯತೆ ಇದೆ.

ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಳ ಮಾಡಿದ ಪರಿಣಾಮ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕೂಡ ಬೆಳಕಿಗೆ ಬರುತ್ತಿವೆ.

ADVERTISEMENT

ಗುರುವಾರ 2,452 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 84 ಸಾವಿರ ದಾಟಿದೆ. ಮತ್ತೆ22 ಮಂದಿ ಮೃತಪಟ್ಟಿದ್ದು, ಸಾವಿಗೀಡಾದವರ ಸಂಖ್ಯೆ 1,360ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.