ADVERTISEMENT

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ: ಕರ್ಣನ ಕುಟುಂಬಕ್ಕೆ 3 ಹಸು ಕೊಡಿಸಿದ ಜಮೀರ್

​ಪ್ರಜಾವಾಣಿ ವಾರ್ತೆ
Published 15 ಜನವರಿ 2025, 8:08 IST
Last Updated 15 ಜನವರಿ 2025, 8:08 IST
<div class="paragraphs"><p>ಕರ್ಣ ಅವರ ಕುಟುಂಬಸ್ಥರಿಗೆ ಸಚಿವ ಜಮೀರ್ ಅಹಮದ್ ಖಾನ್ ಮೂರು ಹಸು ಕೊಡಿಸಿದ್ದಾರೆ.</p></div>

ಕರ್ಣ ಅವರ ಕುಟುಂಬಸ್ಥರಿಗೆ ಸಚಿವ ಜಮೀರ್ ಅಹಮದ್ ಖಾನ್ ಮೂರು ಹಸು ಕೊಡಿಸಿದ್ದಾರೆ.

   

ಬೆಂಗಳೂರು: ಚಾಮರಾಜಪೇಟೆ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಮತ್ತು ಸಹೋದರಿಗೆ ಸಚಿವ ಜಮೀರ್ ಅಹಮದ್ ಖಾನ್ ಮೂರು ಹಸು ಕೊಡಿಸಿದ್ದಾರೆ.

ಕರ್ಣ ಅವರು ಹಸು ಪಡೆಯಲು ಮೊದಲು ಒಪ್ಪಿಕೊಂಡಿದ್ದರೂ ಅನಂತರ ನಿರಾಕರಿಸಿದ್ದರು. ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಹಸು ಪಡೆಯಲು ಒಪ್ಪಿದ್ದರಿಂದ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಸುಮಾರು ₹3 ಲಕ್ಷ ವೆಚ್ಚದಲ್ಲಿ ಮೂರು ಹಸು ಖರೀದಿಸಿ ಹಸ್ತಾಂತರಿಸಿದರು.

ADVERTISEMENT

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಮುದಾ ಮಾತನಾಡಿ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ನಾವು ಶಾಸಕರ ಜತೆ ಇದ್ದೇವೆ' ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.