ADVERTISEMENT

ಬೆಂಗಳೂರು: ಮೆಟ್ರೊ ಕಾಮಗಾರಿ ವೇಳೆ ಕ್ರೇನ್‌ ಕುಸಿತ, ಅಪಾಯದಿಂದ ಪಾರಾದ ಕಾರ್ಮಿಕರು

​ಪ್ರಜಾವಾಣಿ ವಾರ್ತೆ
Published 7 ಜುಲೈ 2023, 17:13 IST
Last Updated 7 ಜುಲೈ 2023, 17:13 IST
ಮಡಿವಾಳ ಬಳಿ ಮೆಟ್ರೊ ಕಾಮಗಾರಿ ನಿರ್ವಹಿಸುತ್ತಿದ್ದ ಕ್ರೇನ್‌ ಶುಕ್ರವಾರ ರಾತ್ರಿ ಕುಸಿದು ಬಿದ್ದಿದೆ.
ಮಡಿವಾಳ ಬಳಿ ಮೆಟ್ರೊ ಕಾಮಗಾರಿ ನಿರ್ವಹಿಸುತ್ತಿದ್ದ ಕ್ರೇನ್‌ ಶುಕ್ರವಾರ ರಾತ್ರಿ ಕುಸಿದು ಬಿದ್ದಿದೆ.    

ಬೆಂಗಳೂರು: ಮಡಿವಾಳ ಬಳಿ ಮೆಟ್ರೊ ಕಾಮಗಾರಿ ನಿರ್ವಹಿಸುತ್ತಿದ್ದ ಕ್ರೇನ್‌ ಶುಕ್ರವಾರ ರಾತ್ರಿ ಕುಸಿದು ಬಿದ್ದಿದೆ. ಕ್ರೇನ್‌ನಲ್ಲಿದ್ದ ಕಾರ್ಮಿಕರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ರಸ್ತೆ ಮೇಲೆ ಕ್ರೇನ್‌ ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ತೊಡಕಾಗಿದೆ.

ಬಿಟಿಎಂನಿಂದ ಮಡಿವಾಳಕ್ಕೆ ಹೋಗುವವರು ಎಚ್‌ಎಸ್‌ಆರ್‌ 14ನೇ ಮುಖ್ಯ ರಸ್ತೆ ಮೂಲಕ ಸಾಗಬೇಕು. ಎಚ್‌ಎಸ್‌ಆರ್‌ನಿಂದ ಮಡಿವಾಳ ಕಡೆಗೆ ಬರುವವರು ಬಿಟಿಎಂ ಬಡಾವಣೆಯ ಮೂಲಕ ಸಂಚರಿಸಬೇಕು. ಕ್ರೇನ್‌ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವವರೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ದಕ್ಷಿಣ ಡಿಸಿಪಿ ಸುಜಿತ ಸಲ್ಮಾನ್‌ ತಿಳಿಸಿದ್ದಾರೆ.

ಹೊರವರ್ತುಲ ರಸ್ತೆಯಲ್ಲಿ ಕ್ರೇನ್‌ ಜಾರಿ ಬಿದ್ದಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಯಾರಿಗೂ ಅಪಾಯ ಉಂಟಾಗಿಲ್ಲ. ಸಂಚಾರ ವ್ಯವಸ್ಥೆಯನ್ನು ಪೊಲೀಸರು ಮಾಡುತ್ತಿದ್ದಾರೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.