ಸಾವು
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಕೋಣನಕುಂಟೆ ನಿವಾಸಿ ವಿಶಾಲಾಕ್ಷ್ಮಿ ಹಿರೇಮಠ(32) ಅವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋಮವಾರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
ದಾವಣಗೆರೆ ಜಿಲ್ಲೆಯ ಹರಿಹರ ಮೂಲದ ವಿಶಾಲಾಕ್ಷಿ ಅವರು 12 ವರ್ಷಗಳ ಹಿಂದೆ ಶಂಭುಲಿಂಗಯ್ಯ ಅವರನ್ನು ಮದುವೆ ಆಗಿದ್ದರು. ದಂಪತಿಗೆ ಮೂವರು ಮಕ್ಕಳಿದ್ದಾರೆ. ಶಂಭುಲಿಂಗಯ್ಯ ಅವರು ಬ್ಯಾಂಕ್‌ವೊಂದರಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.
ವಿಶಾಲಾಕ್ಷಿ ಅವರ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಕಾರಣ ಎಂದು ಹೇಳಲಾಗಿದೆ. ಪೋಷಕರು ಬಂದು ದೂರು ನೀಡಿದ ಬಳಿಕ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.