ಸಾಂದರ್ಭಿಕ ಚಿತ್ರ
ಬೆಂಗಳೂರು: ಹಣಕಾಸು ವಿಚಾರವಾಗಿ ವೃದ್ಧೆಗೆ ಕಾರು ಚಾಲಕನೊಬ್ಬ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗುರುರಾಜ್ ಲೇಔಟ್‌ನ ನಿವಾಸಿ ಕನಕಪುಷ್ಪ (62) ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ಕಾರು ಚಾಲಕ ಮಡಿವಾಳಪ್ಪ ಭಾನುವಾರ ರಾತ್ರಿ ಕನಕಪುಷ್ಪ ಅವರ ಮನೆಯ ಬಳಿಗೆ ತೆರಳಿದ್ದ. ಆಗ ಹಣಕಾಸು ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಜಗಳವು ವಿಕೋಪಕ್ಕೆ ಹೋದಾಗ ಆರೋಪಿ ಮಡಿವಾಳಪ್ಪ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವೃದ್ಧೆಯನ್ನು ಕಂಡ ಅಕ್ಕಪಕ್ಕದ ಮನೆಯ ನಿವಾಸಿಗಳು, ಆಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.
‘ಕನಕಪುಷ್ಪ ಅವರ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.