ಬೆಂಗಳೂರು: ಬಸವೇಶ್ವರ ನಗರದ ಸ್ಪಾವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಸಿಬ್ಬಂದಿ ಬಂಧಿಸಿದ್ದಾರೆ. ಈ ಸಂಬಂಧ ಐಟಿಪಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆರೋಪಿಗಳು ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿರುವ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಯುವತಿಯರನ್ನು ರಕ್ಷಿಸಲಾಯಿತು ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.