ಪೊಲೀಸ್
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಭದ್ರತಾ ಸಿಬ್ಬಂದಿಯಾಗಿ (ಸೆಕ್ಯೂರಿಟಿ ಗಾರ್ಡ್) ಹಗಲಿನಲ್ಲಿ ಕೆಲಸ ಮಾಡುತ್ತಾ, ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಾಣಸವಾಡಿ ಠಾಣೆಯ ಪೊಲೀಸರು ಬಂಧಿಸಿದ್ಧಾರೆ. ನೇಪಾಳದ ಪದಂ ಲಕ್ಷ್ಮಿಶಾಯಿ ಮತ್ತು ಮುಕುಂದ್ ಶಾಯಿ ಬಂಧಿತರು.
ಬಂಧಿತರಿಂದ ₹10 ಲಕ್ಷ ಮೌಲ್ಯದ 117 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
‘ಹಗಲು ಹೊತ್ತು ಬೀಗ ಹಾಕಿರುವ ಮನೆಗಳನ್ನು ಗುರುತಿಸಿ, ರಾತ್ರಿ ವೇಳೆ ಕಬ್ಬಿಣದ ಸಲಾಕೆಯಿಂದ ಬಾಗಿಲು ಮೀಟಿ ಕಳವು ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.
‘ಠಾಣಾ ವ್ಯಾಪ್ತಿಯ ಕಲ್ಯಾಣನಗರದ ಮೂರನೇ ಬ್ಲಾಕ್‌ನಲ್ಲಿ ಕಳವು ಮಾಡಿದ್ದರು. ಮನೆಯ ಮಾಲೀಕರು ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ, ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.