
ಬೆಂಗಳೂರು: ಸೈಬರ್ ವಂಚನೆ ಕುರಿತು ಜಾಗೃತಿ ಮೂಡಿಸುತ್ತಿರುವ ಪೊಲೀಸರಿಂದಲೇ ಸೈಬರ್ ವಂಚಕರು ಹಣ ದೋಚಿದ್ದಾರೆ. ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಸೈಬರ್ ವಂಚಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಪೊಲೀಸ್ ಕಾನ್‌ಸ್ಟೆಬಲ್ ಎಂ.ಪಿ.ಶಬೀರ್ ವಂಚನೆಗೆ ಒಳಗಾದವರು.
ಎಸ್‌ಬಿಐ ಬ್ಯಾಂಕ್ ಹೆಸರಲ್ಲಿ ವಾಟ್ಸ್‌ಆ್ಯಪ್ ಗ್ರೂಪ್‌ವೊಂದನ್ನು ಸೃಷ್ಟಿಸಿ, ಅದಕ್ಕೆ ಶಬೀರ್ ಅವರ ಮೊಬೈಲ್ ಸಂಖ್ಯೆಯನ್ನು ಆರೋಪಿಗಳು ಸೇರಿಸಿದ್ದರು. ಸ್ವಲ್ಪ ಸಮಯದ ಬಳಿಕ ಎಪಿಕೆ ಫೈಲ್ ಅನ್ನು ಕಳುಹಿಸಿ, ‘ಈ ದಿನ ನಿಮ್ಮ ಖಾತೆಯನ್ನು ಅಪ್‌ಡೇಟ್ (ಕೆವೈಸಿ) ಮಾಡಿಕೊಳ್ಳಿ. ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್ ಖಾತೆಯನ್ನು ನಿಷ್ಕ್ರಿಯಗೊಳಿಸಲಾಗುತ್ತದೆ’ ಎಂದು ಸಂದೇಶ ಕಳುಹಿಸಿದ್ದರು. ಹೀಗಾಗಿ ಅವರು ಎಪಿಕ್ ಫೈಲ್ ತೆರೆದು ಕೆವೈಸಿಗೆ ಸಂಬಂಧಿಸಿದ ಮಾಹಿತಿಗಳು, ಆಧಾರ್ ಕಾರ್ಡ್, ಎಟಿಎಂ ನಂಬರ್ ಹಾಗೂ ಪಾನ್ ನಂಬರ್ ಅಪ್‌ಡೇಟ್ ಮಾಡಿದ್ದರು. ಇದಾದ ಸ್ವಲ್ಪ ಸಮಯದ ನಂತರ ಅವರ ಖಾತೆಯಿಂದ ₹5 ಲಕ್ಷ ಕಡಿತವಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.