ಸಾಂದರ್ಭಿಕ ಚಿತ್ರ
– ಐ ಸ್ಟಾಕ್ ಚಿತ್ರ
ಬೆಂಗಳೂರು: ತಾಯಿ ಕಾಶಿ ಯಾತ್ರೆಗೆ ತೆರಳಿದ್ದ ವೇಳೆ ಚಿನ್ನಾಭರಣವನ್ನು ಕಳ್ಳತನ ಮಾಡಿದ್ದ ಆರೋಪದ ಅಡಿ ಪುತ್ರಿಯನ್ನು ಮಾರತ್ತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಶೋಭಾ ಬಂಧಿತ ಆರೋಪಿ. ₹21 ಲಕ್ಷ ಮೌಲ್ಯದ 258 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಯಮಲೂರಿನಲ್ಲಿ ವಾಸವಿರುವ ಆರೋಪಿಯ ತಾಯಿ ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದರು.
‘ಶೋಭಾ ಅವರ ಪತಿ ಕ್ಯಾಬ್ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಕಗ್ಗದಾಸಪುರದಲ್ಲಿ ಹೊಸ ಮನೆ ನಿರ್ಮಿಸಿದ್ದರು. ಮನೆ ನಿರ್ಮಾಣಕ್ಕೆ ಸಾಲ ಮಾಡಿದ್ದರು. ಸಾಲ ತೀರಿಸಲು ಸಾಧ್ಯವಾಗದೇ ತಾಯಿಯ ಮನೆಯಲ್ಲಿ ಕಳ್ಳತನಕ್ಕೆ ಸಂಚು ರೂಪಿಸಿದ್ದರು. ದೂರುದಾರರು ಮಾರ್ಚ್ 20ರಂದು ಕಾಶಿ ಯಾತ್ರೆಗೆ ಹೋಗಿದ್ದರು. ಆ ಸಂದರ್ಭ ದಲ್ಲಿ ಆರೋಪಿ ಕಳ್ಳತನ ಮಾಡಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾರತ್ತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ದೂರುದಾರರ ಮಗಳನ್ನು ಠಾಣೆಗೆ ಕರೆಸಿ, ಕಳ್ಳತನದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದರು. ಆಗ ಮಗಳೇ ಕಳ್ಳತನ ನಡೆಸಿರುವುದು ಬಯಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.