ADVERTISEMENT

5 ಸಾವಿರ ಜನರಿಗೆ ದೀಕ್ಷಾ ಭೂಮಿ ಯಾತ್ರೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2022, 21:07 IST
Last Updated 3 ಅಕ್ಟೋಬರ್ 2022, 21:07 IST
   

ಬೆಂಗಳೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧ ಧರ್ಮದ ದೀಕ್ಷೆ ಪಡೆದ ಸ್ಥಳವಾದ ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾ ಭೂಮಿ ಯಾತ್ರೆಗೆ ಈ ವರ್ಷ ರಾಜ್ಯದಿಂದ 5,000 ಅನುಯಾಯಿಗಳನ್ನು ಸರ್ಕಾರದ ವತಿಯಿಂದ ಕಳುಹಿಸಿಕೊಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ವಿವಿಧ ಧರ್ಮಗಳವರು ವಿವಿಧ ಕ್ಷೇತ್ರಗಳಿಗೆ ಯಾತ್ರೆ ಮಾಡುವ ಮಾದರಿಯಲ್ಲಿ ಅಂಬೇಡ್ಕರ್‌ ಅವರ ಅನುಯಾಯಿಗಳು ಪ್ರತಿ ಅಕ್ಟೋಬರ್‌ನಲ್ಲಿ ನಾಗಪುರದಲ್ಲಿ ನಡೆಯುವ ದಮ್ಮ ಪ್ರವರ್ತನಾ ದಿನ ಕಾರ್ಯಕ್ರಮಕ್ಕೆ ದೀಕ್ಷಾಯಾತ್ರೆ ಕೈಗೊಳ್ಳುವುದು ವಾಡಿಕೆ. ಈ ಬಾರಿ ವಿವಿಧ ಜಿಲ್ಲೆಗಳಿಂದ ಐದು ಸಾವಿರ ಅನುಯಾಯಿಗಳು ತೆರಳಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಯಾತ್ರೆ ಕೈಗೊಳ್ಳುವ ಅನುಯಾಯಿಗಳು ಆನ್‌ಲೈನ್‌ ಮೂಲಕ ಹೆಸರು ನೋಂದಣಿ ಮಾಡಿದ್ದು, ಆಯಾ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಯಾತ್ರಿಗಳನ್ನು ಸುರಕ್ಷಿತವಾಗಿ ನಾಗಪುರ ದೀಕ್ಷಾಯಾತ್ರೆಗೆ ಕರೆದೊಯ್ಯಲು ಬಸ್‌ ವ್ಯವಸ್ಥೆ ಕಲ್ಪಿಸಲು ಆದೇಶಿಸಲಾಗಿದೆ. ಈ ಯೋಜನೆಗೆ ಸುಮಾರು ₹2.5 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಪೂಜಾರಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.