ಶಾಸಕ ಮುನಿರತ್ನ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಮಹಿಳೆಯರ ಘನತೆ, ವ್ಯಕ್ತಿತ್ವ ಹಾಗೂ ಚಾರಿತ್ರ್ಯವಧೆ ಮಾಡುವ ಹೇಳಿಕೆಗಳನ್ನು ನೀಡುತ್ತಿರುವ ರಾಜರಾಜೇಶ್ವರಿನಗರದ ಶಾಸಕ ಮುನಿರತ್ನ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮಹಿಳಾ ಘಟಕ ಆಗ್ರಹಿಸಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಮಾಜಿ ಸದಸ್ಯೆ ಆಶಾ ಸುರೇಶ್, ಕಾಂಗ್ರೆಸ್ ಮುಖಂಡರಾದ ನೇತ್ರಾವತಿ, ಲಕ್ಷ್ಮೀ, ನಳಿನಿ, ‘ಮತ್ತಿಕೆರೆಯ ಜಯಪ್ರಕಾಶ್ ನಾರಾಯಣ ಉದ್ಯಾನದಲ್ಲಿ ಇತ್ತೀಚೆಗೆ ನಡೆದ ‘ಬೆಂಗಳೂರು ನಡಿಗೆ’ ಕಾರ್ಯಕ್ರಮದಲ್ಲಿ ಮುನಿರತ್ನ ಅವರು ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದು ಖಂಡನೀಯ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.