ADVERTISEMENT

ಬೆಂಗಳೂರು| ಮದ್ಯ ಕುಡಿದು ಗಲಾಟೆ: ಪತಿ ಕೊಂದ ಪತ್ನಿ

​ಪ್ರಜಾವಾಣಿ ವಾರ್ತೆ
Published 21 ಜನವರಿ 2026, 14:37 IST
Last Updated 21 ಜನವರಿ 2026, 14:37 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಮದ್ಯ ಕುಡಿದ ಬಳಿಕ ಮನೆಗೆ ಬಂದು ಗಲಾಟೆ ಮಾಡುತ್ತಿದ್ದ ಪತಿಯನ್ನು ಕೊಲೆ ಮಾಡಿದ ಪತ್ನಿಯನ್ನು ಬೊಮ್ಮನಹಳ್ಳಿ ಠಾಣೆಯ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಲಕ್ಷ್ಮಿ (42) ಬಂಧಿತ ಮಹಿಳೆ.

ADVERTISEMENT

ಬೊಮ್ಮನಹಳ್ಳಿಯ ಹೊಂಗಸಂದ್ರದಲ್ಲಿ ಮಂಗಳವಾರ ರಾತ್ರಿ ಈ ಕೃತ್ಯ ನಡೆದಿದೆ.

ಪತಿ ಮುರುಗೇಶ್ (50) ಅವರ ಎದೆಗೆ ಲಕ್ಷ್ಮಿ ಅವರು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದರು.

ಮರುಗೇಶ್‌–ಲಕ್ಷ್ಮಿ ದಂಪತಿಗೆ ಮೂವರು ಹೆಣ್ಣುಮಕ್ಕಳು. ಮೂವರನ್ನೂ ಮದುವೆ ಮಾಡಿಕೊಡಲಾಗಿದೆ.

ಕೂಲಿ ಕೆಲಸ ಮಾಡುತ್ತಿದ್ದ ಮುರುಗೇಶ್ ಅವರಿಗೆ ಮದ್ಯ ಸೇವಿಸುವ ಅಭ್ಯಾಸವಿತ್ತು. ಪ್ರತಿನಿತ್ಯ ಪಾನಮತ್ತರಾಗಿ ಮನೆಗೆ ಬಂದು ಪತ್ನಿಯ ಜತೆಗೆ ಜಗಳವಾಡುತ್ತಿದ್ದರು. ಅದೇ ರೀತಿ ಮಂಗಳವಾರ ರಾತ್ರಿ ಸಹ ಮದ್ಯ ಸೇವಿಸಿ, ಬಂದು ಜಗಳವಾಡಿ ಹಲ್ಲೆ ನಡೆಸಿದ್ದರು. ಇದರಿಂದ ಕೆರಳಿದ ಲಕ್ಷ್ಮಿ ಅವರು ಕೋಪದಲ್ಲಿ ಪತಿಯ ಎದೆಗೆ ಚಾಕು ಇರಿದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಮುರುಗೇಶ್, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.